ಕಾರ್ಯಕರ್ತರು ಆಸಕ್ತಿಯಿಂದ ಪಕ್ಷ ಸಂಘಟಿಸಲಿ

16-HKR-1 BCP
Published on

ಹಿರೇಕೆರೂರ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡೋಣ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಅವರು ಕಾರ್ಯಕರ್ತರು, ಮುಖಂಡರಿಗೆ ಕರೆ ನೀಡಿದರು.
ಪಟ್ಟಣದ ಗೃಹ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಿಜೆಪಿ ಬೂತ್ ಅಧ್ಯಕ್ಷರು, ಬಿಎಲ್‌ಎ-2, ಶಕ್ತಿ ಮತ್ತು ಮಹಾಶಕ್ತಿ ಕೇಂದ್ರಗಳ ಪ್ರಮುಖರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕು. ಪಕ್ಷ ವಹಿಸುವ ಕಾರ್ಯಗಳನ್ನು ತಪ್ಪದೇ ನಿರ್ವಹಿಸಬೇಕು. ಬೂತ್‌ಮಟ್ಟದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಬೇಕು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಮರೆತಿದೆ. ವಿದ್ಯುತ್ ಲೋಡ್ ಶೆಡ್ಡಿಂಗ್, ವಿದ್ಯುತ್ ದರ ಹೆಚ್ಚಳ, ಪಡಿತರ ಚೀಟಿ ರದ್ದು ಮಾಡಲಾಗಿದೆ. ಸರ್ಕಾರದ ಇಂಥ ಅನೇಕ ವೈಫಲ್ಯಗಳನ್ನು ಜನತೆಗೆ ಮುಟ್ಟಿಸೋಣ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಕಾರ್ಯಕರ್ತರು ಪಕ್ಷ ಸೂಚಿಸುವ ಎಲ್ಲ ಕಾರ್ಯಕ್ರಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.
ಜಿಲ್ಲಾ ಪ್ರಭಾರಿ ಎಲ್.ಎನ್. ಕಲ್ಲೇಶಣ್ಣ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರೇಶ ಚಿನ್ನಣ್ಣನವರ, ಮಂಡಲ ಕಾರ್ಯದರ್ಶಿ ದೇವರಾಜ ನಾಗಣ್ಣನವರ, ಎಸ್.ಎಸ್. ಪಾಟೀಲ, ಲಿಂಗರಾಜ ಚಪ್ಪರದಳ್ಳಿ, ಬಿ.ಎನ್. ಬಣಕಾರ, ಆರ್.ಎನ್. ಗಂಗೋಳ, ಜಿ.ಪಿ. ಪ್ರಕಾಶಗೌಡ, ಆನಂದಪ್ಪ ಹಾದಿಮನಿ, ಗುರುಶಾಂತ ಯತ್ತಿನಹಳ್ಳಿ, ಪರಮೇಶಪ್ಪ ಹಲಗೇರಿ, ಮಾಲತೇಶ ಗಂಗೋಳ, ರಾಜು ಹುಚ್ಚಗೊಂಡ್ರ, ಶೇಖಣ್ಣ ತುಮ್ಮಿನಕಟ್ಟಿ, ರೇಣುಕಪ್ಪ ಭರಮಗೌಡ್ರ, ಐ.ಬಿ. ಗುಬ್ಬೇರ, ಸಂಜೀವಯ್ಯ ಕಬ್ಬಿಣಕಂತಿಮಠ, ಮನೋಹರ ವಡ್ಡಿನಕಟ್ಟಿ, ಮಂಜುಳಾ ಬಾಳಿಕಾಯಿ, ಲತಾ ಬಣಕಾರ, ಬಿ.ಟಿ. ಚಿಂದಿ, ಚನ್ನೇಶ ದಿವಿಗಿಹಳ್ಳಿ, ದುರಗೇಶ ತಿರಕಪ್ಪನವರ, ಮಂಜುನಾಥ ಚಲವಾದಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net