ಹಾವೇರಿ: ಕೆಲಸ ಮಾಡು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಕೆರೂರ ತಾಲೂಕಿನ ವರಹತಾ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
ವಿಜಯ ಆನಂದಪ್ಪ ಗೊರಚಿಕೊಂಡ (23) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ಆದ್ದರಿಂದ ಮನೆಯಲ್ಲಿ ಮದ್ಯ ಸೇವನೆ ಬಿಟ್ಟು ಸರಿಯಾಗಿ ಕೆಲಸ ಮಾಡು ಎಂದು ಬುದ್ಧಿವಾದ ಹೇಳಿದ್ದರು. ಇದನ್ನು ಮನಸ್ಸಿಗೆ ಹಚ್ಚಿಕೊಂಡ ವಿಜಯ ಜಮೀನಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.