ಅನಿಷ್ಟ ಪದ್ಧತಿಗಳಿಂದ ಮಕ್ಕಳ ಭವಿಷ್ಯ ಹಾಳು

STUDENT
ಕುಷ್ಟಗಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ನವಲಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಹನುಮೇಶ ಸಮಸ್ಯೆ ಹೇಳಿಕೊಳ್ಳುತ್ತಿರುವುದು.
Published on

ಕುಷ್ಟಗಿ: ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಾಲೂಕಿನ ಹಿರೇಮನ್ನಾಪುರ ಗ್ರಾಪಂ ಪಿಡಿಒ ಅಂಬುಜಾ ಪಾಟೀಲ್ ಹೇಳಿದರು.

ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಬುಧವಾರ ಮಾತನಾಡಿದರು. ಬಾಲ್ಯ ವಿವಾಹ ಎಂಬ ಅನಿಷ್ಟ ಪದ್ಧತಿಗಳಿಂದ ಮಕ್ಕಳ ಭವಿಷ್ಯ ಹಾಳುಗುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯುವ ಕಾರ್ಯ ಎಲ್ಲರಿಂದಾಗಬೇಕಿದೆ. ಮಕ್ಕಳನ್ನು ದುಡಿಮೆಗೆ ದೂಡಿ ಶಿಕ್ಷಣದ ಹಕ್ಕಿನಿಂದ ವಂಚಿತರನ್ನಾಗಿಸಬೇಡಿ ಎಂದು ಸಲಹೆ ನೀಡಿದರು.

ಗ್ರಾಪಂ ಉಪಾಧ್ಯಕ್ಷ ಪ್ಯಾಟೆಪ್ಪ ಸೂಡಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತಿ ಗ್ರಾಮದಲ್ಲಿ ಗ್ರಾಮ ಸಭೆ ಆಯೋಜಿಸಿ ಜಾಗ್ರತೆ ಮೂಡಿಸಲಾಗುತ್ತಿದೆ ಎಂದರು.

ಸದಸ್ಯ ಅಡಿವೆಪ್ಪ ಮೇಳಿ, ಅಂಗನವಾಡಿ ಮೇಲ್ವಿಚಾರಕಿ ನಾಗಮ್ಮ ಗುಂಡೂರು, ಹಂಚಿನಾಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಮಡ್ಡೇರ್, ಪ್ರಮುಖರಾದ ಬಸನಗೌಡ ಪೊಲೀಸ್ ಪಾಟೀಲ್, ಲಿಂಗರಾಜ ಲಿಂಗದಹಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net