ಹಿರೀಕ್ಯಾತನಹಳ್ಳಿಯಲ್ಲಿ ಕೆಂಪೇಗೌಡರ ಜಯಂತ್ಯುತ್ಸವ

HUN-JULY-1-3(HK HALLI HS SCHOOL HONOURING)
ಹುಣಸೂರು ತಾಲೂಕು ಹಿರೀಕ್ಯಾತನಹಳ್ಳಿ ಗ್ರಾಮದ ಹೈಸ್ಕೂಲ್ ಬಡಾವಣೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. ಬಿ.ನಾಗರಾಜು, ಸಂಪತ್, ನಂಜೇಗೌಡ ಇದ್ದರು.
Published on

ಹುಣಸೂರು: ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ಹೈಸ್ಕೂಲ್ ಬಡಾವಣೆಯಲ್ಲಿ ಸೋಮವಾರ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ತಾಪಂ ಮಾಜಿ ಅಧ್ಯಕ್ಷ ಬಿ.ನಾಗರಾಜು, 500 ವರ್ಷಗಳ ಹಿಂದೆ ನಾಡಪ್ರಭು ಕೆಂಪೇಗೌಡರು ನಾಡಿನ ಅಭಿವೃದ್ಧಿಗಾಗಿ ದೂರದರ್ಶಿತ್ವದ ಯೋಜನೆಗಳನ್ನು ರೂಪಿಸಿ ಜನರಿಗಾಗಿಯೇ ಬದುಕಿದರು. ಆದರೆ ಇಂದಿನ ರಾಜಕಾರಣಿಗಳು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುವ ಮೂಲಕ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಯಜಮಾನ ನಂಜೇಗೌಡ, ಯುವ ಮುಖಂಡ ಸಂಪತ್ ಸೇರಿದಂತೆ ನೂರಾರು ಯುವಕರು ಹಾಜರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಯುವಕರು ಬೃಹತ್ ಕೆಂಪೇಗೌಡರ ಎತ್ತರದ ಕಟೌಟ್‌ಗೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net