ಸಿದ್ದರಾಮಯ್ಯಗೆ ಕಂಬಳಿ ಗೌರವ

HYR congress 02
Published on

ಹಿರಿಯೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜಿ.ಪಂ. ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಅವರು ಕಂಬಳಿ ನೀಡಿ ಗೌರವ ಸಮರ್ಪಿಸಿದರು.

ಎಲ್ಲರೂ ಒಗ್ಗೂಡಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಜನರ ಪ್ರೀತಿ ವಿಶ್ವಾಸ ಗಳಿಸಬೇಕು. ಕಾಂಗ್ರೆಸ್ ಮತ್ತೆ ಗತವೈಭವಕ್ಕೆ ಮರಳುವಂತೆ ಮಾಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾಗಿ ಅವರು ಹೇಳಿದರು.

ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಎಚ್.ಆಂಜನೇಯ, ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ಜಿಪಂ ಸದಸ್ಯರಾದ ಆರ್.ನಾಗೇಂದ್ರನಾಯ್ಕ, ಯೋಗೇಶ್‌ಬಾಬು, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net