ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಾನ

HYR NSUI 03
Published on

ಹಿರಿಯೂರು: ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಘಟಕದಿಂದ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ರಕ್ತ ನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದೆ. ಸಾಮೂಹಿಕ ರಕ್ತದಾನ ಶಿಬಿರ ಆಯೋಜಿಸಿ ಸಂಕಷ್ಟದಲ್ಲಿರುವ ಬಡ ಜನತೆಗೆ ನೆರವಾಗಬೇಕು. ರಕ್ತದಾನದಿಂದ ಅಮೂಲ್ಯ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ ಎಂದರು.

ನಗರಸಭೆ ಸದಸ್ಯ ಗುಂಡೇಶ್ ಕುಮಾರ್ ಮಾತನಾಡಿ, ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ನೂರಾರು ಯುವಕರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಜಿಪಂ ಸದಸ್ಯರಾದ ಶಶಿಕಲಾ ಸುರೇಶ್ ಬಾಬು, ಆರ್.ನಾಗೇಂದ್ರನಾಯ್ಕ, ಪಾಪಣ್ಣ, ಕಾಂಗ್ರೆಸ್ ಮುಖಂಡ ಬಿ.ಎಚ್.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್‌ಬಾಬು, ನಗರಸಭೆ ಸದಸ್ಯ ಅಜಯ್‌ಕುಮಾರ್, ಜಿ.ಎಲ್.ಮೂರ್ತಿ, ಮೋಹನ್, ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net