ದೇಶದ ಪ್ರಗತಿ ಕಾರ್ಮಿಕರ ಶ್ರಮದಲ್ಲಿದೆ

CTD CONGRESS 03
Published on

ಹಿರಿಯೂರು: ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕರ ಶ್ರಮ ಅನನ್ಯವಾದುದು ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ತಾಲೂಕಾಧ್ಯಕ್ಷ ಜಿ.ದಾದಾಪೀರ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ಶ್ರಮದಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ. ರಾಜ್ಯ-ಕೇಂದ್ರ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿ, ಲಾಕ್‌ಡೌನ್ ಪರಿಣಾಮ ಕಾರ್ಮಿಕರ ಜೀವನ ನಿರ್ವಹಣೆ ಕಷ್ಟ-ಸಾಧ್ಯವಾಗಿದ್ದು, ಸಂಕಷ್ಟದಲ್ಲಿರುವ ಕಾರ್ಮಿಕರ ಬ್ಯಾಂಕ್ ಖಾತೆಗೆ ಕನಿಷ್ಠ 10 ಸಾವಿರ ರೂ. ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಪಿ.ಎಸ್.ಸಾದತ್ ವುಲ್ಲಾ, ನಗರಸಭೆ ಸದಸ್ಯ ಗುಂಡೇಶ್ ಕುಮಾರ್, ಈರಲಿಂಗೇಗೌಡ, ಅಜಯ್‌ಕುಮಾರ್, ಪ್ರಕಾಶ್, ತಿಮ್ಮಯ್ಯ, ಶಿವಕುಮಾರ್, ರಫೀಕ್ ಅಹಮ್ಮದ್, ಸೋಮಸುಂದರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net