ವಿವಿ ಸಾಗರಕ್ಕೆ ಹೆಚ್ಚುವರಿ ನೀರು ಭರವಸೆ

poornima MLA 19
Published on

ಹಿರಿಯೂರು: ಜೀವನಾಡಿ ವಿವಿ ಸಾಗರಕ್ಕೆ ಯಾವುದಾದರು ಮೂಲದಿಂದ ಹೆಚ್ಚುವರಿ ನೀರು ಹರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಶಾಸಕಿ ಕೆ.ಪೂರ್ಣಿಮಾ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ ಕುರಿತು ಚರ್ಚಿಸಲಾಯಿತು.

ತಾಲೂಕಿನ ಧರ್ಮಪುರ, ಹೊಸಯಳನಾಡು, ವಿ.ವಿ.ಪುರ, ಐಮಂಗಲ ಇತರೆಡೆ ಕುಡಿವ ನೀರಿಗೆ ಹಾಹಾಕಾರ ಎದುರಾಗಿದ್ದು, ವಿವಿ ಸಾಗರದಿಂದ ನೇರ ಪೈಪ್‌ಲೈನ್ ಮೂಲಕ ನೀರು ಹರಿಸಲು ಸರ್ಕಾರ ಅನುಮೋದನೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಇದಕ್ಕೆ ಸಿಎಂ ಪೂರಕವಾಗಿ ಸ್ಪಂದಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಲಭ್ಯವಿರುವ ನೀರನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ಹಂಚಿಕೆ ಮಾಡಲಾಗಿದೆ. ಈಗ ಬದಲಾಯಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ಸ್ಪಷ್ಟಡಿಸಿದ್ದು, ಬೇರೆ ಯಾವುದಾದರು ಮೂಲದಿಂದ ನೀರು ಹರಿಸಲು ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದರು ಎಂದು ಪೂರ್ಣಿಮಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net