ಎಲ್ಲ ಕಾರ್ಮಿಕರಿಗೂ ಪರಿಹಾರ ನೀಡಿ

HYR congress 14
Published on

ಹಿರಿಯೂರು: ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ ಕೆಲ ಕಟ್ಟಡ ಕಾರ್ಮಿಕರಿಗೆ ಮಾತ್ರ ಸೀಮಿತವಾಗಿದೆ. ಇದನ್ನು ಎಲ್ಲ ಕಾರ್ಮಿಕರಿಗೂ ವಿಸ್ತರಣೆ ಮಾಡಬೇಕೆಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಸತ್ಯನಾರಾಯಣ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಲಾಕ್‌ಡೌನ್ ಸಂಕಷ್ಟದಲ್ಲಿರುವ ಶ್ರಮಿಕರಿಗೆ ನೆರವಾಗಲು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಬೆರಳೆಣಿಕೆ ಕಾರ್ಮಿಕರ ಖಾತೆಗೆ ಹಣ ಜಮೆಯಾಗಿದೆ. ಎಲ್ಲ ಕಾರ್ಮಿಕರಿಗೆ ಪರಿಹಾರದ ಹಣ ವಿತರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ತಾಲೂಕಾಧ್ಯಕ್ಷ ಜಿ.ದಾದಾಪೀರ್, ಉಪಾಧ್ಯಕ್ಷ ಮಾರುತಿರಾವ್, ಪ್ರಧಾನ ಕಾರ್ಯದರ್ಶಿ ಎಸ್.ತಿಮ್ಮಯ್ಯ, ರಫೀಕ್ ಉಲ್ಲಾ, ಜಿಲಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net