ನ್ಯಾಯಬೆಲೆ ಅಂಗಡಿ ಲೈಸೆನ್ಸ್ ಅಮಾನತು

HYR ration 10
Published on

ಹಿರಿಯೂರು: ತಾಲೂಕಿನ ಶ್ರವಣಗೆರೆ ಗ್ರಾಮದಲ್ಲಿ ಪಡಿತರ ವಿತರಣೆಗೆ ಗ್ರಾಹಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ಅಮಾನತು ಪಡಿಸಲಾಗಿದೆ.

ಕೋವಿಡ್-19ರ ತುರ್ತು ಪ್ರಯುಕ್ತ ಏಪ್ರಿಲ್-ಮೇ ತಿಂಗಳ ಪಡಿತರ ಆಹಾರ ಧಾನ್ಯಗಳನ್ನು ಪಡಿತರಿಗೆ ಉಚಿತವಾಗಿ ವಿತರಿಸಲು ಸರ್ಕಾರ ಆದೇಶಿಸಿದ್ದರೂ ಒಟಿಪಿ ನೆಪದಲ್ಲಿ ಗ್ರಾಹಕರಿಂದ ಹಣ ವಸೂಲಿ, ತೂಕದಲ್ಲಿ ವ್ಯತ್ಯಾಸ, ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಪಡಿತರ ವಿತರಿಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು.

ಕೆಲ ದಿನಗಳ ಹಿಂದೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಸಿ ಇಲಾಖೆಗೆ ವರದಿ ಸಲ್ಲಿಸಿದ್ದರು.

ಪಡಿತರ ವಿತರಣೆ ವೇಳೆ ಲಾಕ್‌ಡೌನ್ ಆದೇಶ ಉಲ್ಲಂಘಿಸಿದ್ದು, ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಯಾವುದೇ ಸೂಚನೆ ನೀಡದೆ ಗುಂಪಾಗಿ ನಿಲ್ಲಿಸಿ ಪಡಿತರ ವಿತರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net