ಸಿಎಎ ಪರ ಜನ ಜಾಗೃತಿ

HYR BJP 08
Published on

ಹಿರಿಯೂರು: ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ವಿರೋಧ ಪಕ್ಷಗಳು ಅಪಪ್ರಚಾರ ನಡೆಸಿ, ಸಮಾಜದ ಸ್ವಾಸ್ಥ್ಯ ಹಾಳು ಮಡುತ್ತಿವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್ ದೂರಿದರು.

ಬಿಜೆಪಿ ಮಂಡಲ ಘಟಕ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೆಲ ಕಿಡಿಗೇಡಿಗಳು ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದ ದೇಶದ ಮುಸ್ಲಿಮರನ್ನು ಹೊರ ಹಾಕಲಾಗುತ್ತದೆ ಎಂಬ ಸುಳ್ಳು ವದಂತಿ ಹಬ್ಬಿಸಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಯುವ ಸಮೂಹ ಸಿಎಎ ಬಗ್ಗೆ ವಾಸ್ತವ ಮಾಹಿತಿ ಅರಿತು ಸಾಮಾನ್ಯ ಜನರಿಗೆ ಮನದಟ್ಟು ಮಾಡಬೇಕು ಎಂದು ಕರೆ ನೀಡಿದರು.

ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್‌ಕುಮಾರ್ ಮಾತನಾಡಿ, ಬಿಜೆಪಿ ಕಾರ್ಯಕರ್ತರು-ಯುವಕರು ಸಿಎಎ ಕಾಯ್ದೆಯ ಮಹತ್ವದ ಬಗ್ಗೆ ಅರಿತು ಬೀದಿ ಬದಿ ವ್ಯಾಪಾರಿಗಳು-ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಮುಖಂಡರಾದ ಹಾಲಪ್ಪ, ವೆಂಕಟೇಶ್, ಎಂ.ಎಸ್. ರಾಘವೇಂದ್ರ, ಹರ್ಷ, ಎ.ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net