

ಹಿರಿಯೂರು: ನಗರದಲ್ಲಿ ಸ್ವಚ್ಛತೆ ಇಲ್ಲದೆ ಸೊಳ್ಳೆಗಳ ಹಾವಳಿ ಹೆಚ್ಚಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ ಎಂದು ರಾಜ್ಯ ನಿವೃತ್ತ ಪೌರನೌಕರ ಮತ್ತು ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಎಲ್.ನಾರಾಯಣಾಚಾರ್ ದೂರಿದ್ದಾರೆ.
ಈಗಾಗಲೇ ಕರೊನಾ ವೈರಾಣು ಭೀತಿ ಇದೆ. ವಿವಿಧ ಬಡಾವಣೆಗಳಲ್ಲಿ ಅನೈರ್ಮಲ್ಯ ತಾಂಡವಾಡುತ್ತಿದೆ. ಹಂದಿ, ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ನಗರಸಭೆ ಜಾಣಮೌನ ವಹಿಸಿರುವುದು ದುರಂತ. ಇನ್ನಾದರೂ ಎಚ್ಚೆತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.