ನಗರಕ್ಕೆ ಬೇಕು ಮೂಲ ಸೌಲಭ್ಯ

HYR cmc 02
Published on

ಹಿರಿಯೂರು: ನಗರಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಂದೇ ಮಾತರಂ ಜಾಗೃತಿ ಸಂಘಟನೆ ಕಾರ್ಯಕರ್ತರು ಸೋಮವಾರ ನಗರಸಭೆ ಆಯುಕ್ತ ಶಿವಪ್ರಸಾದ್‌ಗೆ ಮನವಿ ಸಲ್ಲಿಸಿದರು.

ನಗರದಲ್ಲಿ ಹಂದಿ-ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ನಾಗರಿಕರು, ವಿದ್ಯಾರ್ಥಿಗಳು ಆತಂಕದಲ್ಲಿ ಓಡಾಡುವಂತಾಗಿದೆ. ಚರಂಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಸೊಳ್ಳೆಗಳ ಹಾವಳಿ ಹೆಚ್ಚಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ ಎಂದು ದೂರಿದರು.

ರಸ್ತೆ ಗುಂಡಿ ಮುಚ್ಚಿ: ನಗರದಲ್ಲಿ ಹಾದು ಹೋಗಿರುವ ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ ವಿಸ್ತರಣೆ ದಶಕದಿಂದ ನನೆಗುದಿಗೆ ಬಿದ್ದಿದ್ದು, ಈ ರಸ್ತೆಯ ಆಳುದ್ದದ ಗುಂಡಿಗಳು ವಾಹನ ಸವಾರರನ್ನು ಹೈರಾಣಾಗಿಸಿವೆ. ಕಿರಿದಾದ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳ ಸಂಚಾರದಿಂದ ಅಪಘಾತ ಸಂಖ್ಯೆ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮುಖಂಡರಾದ ಎಂ.ಎಲ್.ಗಿರಿಧರ್, ವಿ.ಅರುಣ್ ಕುಮಾರ್, ಮಂಜುನಾಥ್, ಪ್ರತಾಪ್, ಸುರೇಶ್, ವಿಜಯಕುಮಾರ್, ಪರಮೇಶ್, ನಾಗರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net