

ಹಿರಿಯೂರು: ಕರೊನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸಲು ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲು ತಾಲೂಕು ಆಡಳಿತ ಆದೇಶಿಸಿದೆ.
ಯುಗಾದಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ಧಾರ್ಮಿಕ ಆಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದು, ಕರೊನಾ ವೈರಸ್ ಹಡುವ ಸಂಭವ ಹೆಚ್ಚು. ಆದ್ದರಿಂದ ಮಾ.24 ರಿಂದ 26ರ ವರೆಗೆ ದೇವಸ್ಥಾನಗಳ ಪ್ರವೇಶಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ಅಗತ್ಯ ಕ್ರಮ ಕೈಗೊಳ್ಳಲು ಸ್ಥಳೀಯ ಗ್ರಾಪಂ ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಸತ್ಯನಾರಾಯಣ ತಿಳಿಸಿದ್ದಾರೆ.