ಹಿರಿಯೂರು ರಸ್ತೆ ವಿಸ್ತರಣೆಗಾಗಿ ಡಿಸಿಎಂಗೆ ಮನವಿ

HYR DCM 19
Published on

ಹಿರಿಯೂರು: ದಶಕಗಳಿಂದ ನನೆಗುದಿಗೆ ಬಿದ್ದಿರುವ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡುವಂತೆ ರೈತ ಮುಖಂಡರು ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ವಿಜಯಪುರದಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ್ದ ಡಿಸಿಎಂ ಅವರನ್ನು ಭೇಟಿ ಮಾಡಿದ ಮುಖಂಡರು, ಹಿರಿಯೂರಿನಲ್ಲಿ ಹಾದು ಹೋಗಿರುವ ಕಿರಿದಾದ ಹೆದ್ದಾರಿ ಸಂಪೂರ್ಣ ಹಾಳಾಗಿದೆ. ದ್ವಿಚಕ್ರ ವಾಹನ, ಟಾಟಾ ಏಸ್ ಇತರ ಲಘು ವಾಹನಗಳು ಸಂಚರಿಸುವುದು ದುಸ್ತರವಾಗಿದೆ. ಕಿರಿದಾದ ರಸ್ತೆ, ಗುಂಡಿಗಳಿಂದ ಅಪಘಾತ ಸಂಖ್ಯೆ ಹೆಚ್ಚಾಗಿದ್ದು ತಕ್ಷಣ ರಸ್ತೆ ವಿಸ್ತರಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಭರವಸೆ: ರಸ್ತೆ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಭರವಸೆ ನೀಡಿದರು ಎಂದು ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ ತಿಳಿಸಿದರು.

ರೈತ ಮುಖಂಡರಾದ ಬಿ.ಒ. ಶಿವಕುಮಾರ್, ಲಕ್ಷ್ಮೀಕಾಂತ್, ವಿ. ಕಲ್ಪನಾ, ತಿಪ್ಪೇಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net