ಬನಶಂಕರಿ ದೇವಿ ವಿಜೃಂಭಣೆ ತೇರು

HYR bhanashankari 09
Published on

ಹಿರಿಯೂರು: ನಗರದಲ್ಲಿ ಶ್ರೀ ಬನಶಂಕರಿ ದೇವಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಉತ್ಸವದ ಅಂಗವಾಗಿ ಧ್ವಜಾರೋಹಣ, ಗಂಗಾಪೂಜೆ, ಅಂಕುರಾರ್ಪಣೆ, ಅಭಿಷೇಕ, ಹೋಮ-ಹವನ, ಬಲಿ ಹರಣ, ಗಣಪತಿ ಪೂಜೆ, ಪುಣ್ಯಾಹ, ಕಲ್ಯಾಣೋತ್ಸವ ಇತರ ಧಾರ್ಮಿಕ ಕಾರ್ಯಗಳು ನೆರವೇರಿದವು.

ಫೆ.10ರ ಬೆಳಗ್ಗೆ 8ಕ್ಕೆ ಶ್ರೀ ಬನಶಂಕರಿ ಮಾತೆಗೆ ಪಂಚಾಮೃತ ಅಭಿಷೇಕ, ವಸಂತೋತ್ಸವ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಇತರ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ದೇವಸ್ಥಾನ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net