ಹೈನುಗಾರಿಕೆಯಿಂದ ಸ್ವಾವಲಂಬಿ ಜೀವನ

HYR chillahalli 29
Published on

ಹಿರಿಯೂರು; ಬಯಲುಸೀಮೆ ರೈತರು ಹೈನುಗಾರಿಕೆಯಿಂದ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬಹುದು ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಹನುಮಂತಪ್ಪ ಹೇಳಿದರು.

ಪಶು ಇಲಾಖೆ, ಹಾಲು ಉತ್ಪಾದಕರ ಸಹಕಾರ ಸಂಘದಿಂದ ತಾಲೂಕಿನ ಚಿಲ್ಲಹಳ್ಳಿಯಲ್ಲಿ ಬುಧವಾರ ಏರ್ಪಡಿಸಿದ್ದ ಪಶು ಆರೋಗ್ಯ ತಪಾಸಣೆ ಶಿಬಿರ, ಮಿಶ್ರ ತಳಿ ಹಸು, ಕರು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬೀಳುವುದರಿಂದ ರೈತರು ಕೃಷಿ ಚಟುವಟಿಕೆ ಜತೆಗೆ ಪಶುಪಾಲನೆಯಿಂದ ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರ, ಹಾಲು ಉತ್ಪಾದನೆಯಿಂದ ಹೆಚ್ಚು ಲಾಭ ಗಳಿಸಬಹುದು ಎಂದು ಸಲಹೆ ನೀಡಿದರು.

ಮೇವು ಬೆಳೆವ ಜಮೀನಿಗೆ ಹೆಚ್ಚು ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಸುವುದರಿಂದ ಹಸುಗಳ ಹಾಲು ಉತ್ಪಾದನೆ ಕಡಿಮೆಯಾಗುತ್ತದೆ. ಸಾವಯವ ಗೊಬ್ಬರ ಬಳಸಿದರೆ ಭೂಮಿಯ ಫಲವತ್ತತೆ ಹೆಚ್ಚುತ್ತದೆ ಎಂದು ತಿಳಿಸಿದರು.

ಡಾ.ಸಂಪತ್ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಹಸು-ಕರುಗಳಿಗೆ ತೈಲೇರಿಯಾ ಹೆಚ್ಚಾಗಿ ಕಾಣಿಸಿಕೊಳ್ಳಬಹುದು. ತಕ್ಷಣವೇ ಹತ್ತಿರದ ಪಶು ಆಸ್ಪತ್ರೆ ತೆರಳಿ ಸೂಕ್ತ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಜಗನ್ನಾಥ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಣ್ಣ, ಡಾ.ನಾಗರಾಜ್, ಡಾ.ಹೊರಕೇರಪ್ಪ, ಡಾ.ಕುಮಾರ್, ಡಾ.ಗುರುಪ್ರಸಾದ್, ಡಾ.ಕಿರಣ್, ಡಾ.ವಿರೂಪಾಕ್ಷ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಶಿವಣ್ಣ, ಸಿದ್ದೇಶ್, ರವಿಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net