ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ 1.10 ಕೋಟಿ ಅನುದಾನ

HYR aranakatte school 12
Published on

ಹಿರಿಯೂರು: ಕ್ಷೇತ್ರದ ಜನತೆಗೆ ಚುನಾವಣೆ ಪ್ರಣಾಳಿಕೆಯಲ್ಲಿ ಶಿಕ್ಷಣ, ಆರೋಗ್ಯ ಮತ್ತು ನೀರು ನೀಡುವ ಕುರಿತು ಸಂಕಲ್ಪ ಮಾಡಲಾಗಿದ್ದು, ಇದನ್ನು ಈಡೇರಿಸಿ ಮಾದರಿ ತಾಲೂಕಾಗಿಸಲು ಶ್ರಮಿಸಲಾಗುವುದು ಎಂದು ಶಾಸಕಿ ಕೆ.ಪೂರ್ಣಿಮಾ ಭರವಸೆ ನೀಡಿದರು.

ತಾಲೂಕಿನ ಆರನಕಟ್ಟೆ ವಾಣಿ ವಿಲಾಸ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಒಂದು ವರ್ಷದಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ 1.10 ಕೋಟಿ ಅನುದಾನ ನೀಡುವುದಾಗಿ ತಿಳಿಸಿದರು.

ಗ್ರಾಮೀಣ ಭಾಗದ ಶಾಲೆಯೊಂದು ಉತ್ತಮ ಕಾರ್ಯದಿಂದ ಇಂದು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸಂಸದ ಎ.ನಾರಾಯಣಸ್ವಾಮಿ ಮಾತನಾಡಿ, ಇಂದು ಸರ್ಕಾರಿ ಶಾಲೆಗಳೆಂದರೆ ಜನರಲ್ಲಿ ತಿರಸ್ಕಾರ ಹಾಗೂ ತಾತ್ಸಾರ ಮನೋಭಾವವಿದೆ. ಆದರೆ ಉತ್ತಮ ವ್ಯಕ್ತಿಗಳಾಗಿ, ಸಾಧಕರಾಗಿ ಆಯ್ಕೆಯಾಗುತ್ತಿರುವುದು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳೇ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಜನಪದ ವಿದ್ವಾಂಸ ಡಾ.ಪಿ.ಬಿ.ಶಿವಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ್, ಬಿಜೆಪಿ ಒಬಿಸಿ ರಾಜ್ಯ ಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ವೆಂಕಟಸ್ವಾಮಿ, ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಸ್.ಬಿ.ಶಿವಕುಮಾರ್ ಮಾತನಾಡಿದರು.

ವಿದ್ಯಾಸಂಸ್ಥೆ ಅಧ್ಯಕ್ಷ ಜೆ.ಹೊನ್ನಯ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಎಸ್.ರಾಮಸ್ವಾಮಿ, ಮಾಜಿ ಶಾಸಕ ಆರ್.ರಾಮಯ್ಯ, ತಾಪಂ ಸದಸ್ಯ ಕರಿಯಪ್ಪ, ಗ್ರಾಪಂ ಅಧ್ಯಕ್ಷೆ ಪುಷ್ಪಲತಾ, ಸದಸ್ಯೆ ಉಷಾ ರಮೇಶ್, ಮುಖಂಡ ಎಸ್.ಆರ್.ವಿಶ್ವನಾಥ್, ದ್ಯಾಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net