ಭಕ್ತಿ ಪರಂಪರೆಯ ಪ್ರತೀಕ ಮಲ್ಲಮ್ಮ

HYR HEMAREDDY 10
Published on

ಹಿರಿಯೂರು: ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಅಸಾಮಾನ್ಯಳಾಗಿ ಭಕ್ತಿ ಪರಂಪರೆಯ ಜೀವನ ಸಾಗಿಸಿದ ಮಹಾನ್ ಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಎಂದು ವೀರಶೈವ ಮಹಾಸಭಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಶಿಕಲಾ ರವಿಶಂಕರ್ ಬಣ್ಣಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಸಮಾಜದಲ್ಲಿನ ಸಾಮಾನ್ಯ ಮಹಿಳೆಯರ ಸಂಕಷ್ಟಗಳ ಪ್ರತೀಕ ಮಲ್ಲಮ್ಮ. ಅವರ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆ. ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.

ನಿವೃತ್ತ ಶಿಕ್ಷಣಾಧಿಕಾರಿ ಶಿವಪ್ರಸಾದ್ ಮಾತನಾಡಿ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ರಾಮಾಪುರಂನಲ್ಲಿ ಜನಿಸಿದ ಮಹಿಳೆ ಮಲ್ಲಮ್ಮ. ಹುಟ್ಟಿದ ಮನೆಗೂ, ಕೊಟ್ಟ ಮನೆಗೂ ಕೀರ್ತಿ ತಂದು ಶಿವಶರಣೆಯಾಗಿ ಬಾಳಿದ ಮಹಾನ್ ಶಕ್ತಿ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net