ಹಿರಿಯೂರಿನಲ್ಲಿ 75 ಕಿ.ಮೀ. ತಿರಂಗಾ ಯಾತ್ರೆ

Hiriyur, Independence, Amrita Mahotsav, Har Ghar Tiranga, Abhiyan,
Published on

ಹಿರಿಯೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ 75 ಕಿ.ಮೀ. ತಿರಂಗಾ ಯಾತ್ರೆ ಮೂಲಕ ಸ್ವಾತಂತ್ರ್ಯ ಹೋರಾಟದೊಂದಿಗಿನ ಕಾಂಗ್ರೆಸ್ ನಂಟನ್ನು ಯುವ ಜನರಿಗೆ ಮನವರಿಕೆ ಮಾಡಲು ಕೈ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಅಮೃತ ಮಹೋತ್ಸವ ಯಾತ್ರೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಮಾಜಿ-ಹಾಲಿ ಜನಪ್ರತಿನಿಧಿಗಳು, ವಿವಿಧ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಅಮೃತ ಮಹೋತ್ಸವದ ಅರ್ಥಪೂರ್ಣ ಆಚರಣೆ ನಮ್ಮ ಕರ್ತವ್ಯ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಮಾಜಿ ಅಧ್ಯಕ್ಷ ರಾಕ್ ಮಂಜುನಾಥ್, ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ, ಆರ್.ನಾಗೇಂದ್ರ ನಾಯ್ಕ, ತಾಪಂ ಮಾಜಿ ಸದಸ್ಯ ಎಚ್.ವಿ.ವೆಂಕಟೇಶ್, ಕೆಪಿಸಿಸಿ ಸದಸ್ಯರಾದ ಕಂದಿಕೆರೆ ಸುರೇಶ್ ಬಾಬು, ಅಮೃತೇಶ್ವರ ಸ್ವಾಮಿ, ನಗರಸಭೆ ಅಧ್ಯಕ್ಷೆ ಶಿವರಂಜನಿ, ಕೃಷ್ಣಮೂರ್ತಿ, ಈರಲಿಂಗೇಗೌಡ, ಜೀವೇಶ್, ಜಿ.ಎಲ್.ಮೂರ್ತಿ, ಹರೀಶ್, ಗೋಪಾಲ್, ಚಂದ್ರಪ್ಪ, ಶಿವಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net