ಪ್ರಗತಿಗೆ ಸಾಮಾಜಿಕ ನ್ಯಾಯ ಅವಶ್ಯ

HYR law prgm 26
Published on

ಹಿರಿಯೂರು: ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ ಎಂದು ನ್ಯಾಯಾಧೀಶೆ ದಮಯಂತಿ ಸೋಮಯ್ಯ ಹೇಳಿದರು.

ವಿಶ್ವ ಸಾಮಾಜಿಕ ನ್ಯಾಯ ದಿನ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು-ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಶಾಂತಿ, ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಆಧಾರವಾಗಿದೆ. ವಿಶ್ವದಲ್ಲಿ ಲಿಂಗ ತಾರತಮ್ಯ, ಅಸಮಾನತೆ, ಧರ್ಮ, ಬಡತನ, ನಿರುದ್ಯೋಗ ಸಮಸ್ಯೆಗಳು ಜೀವಂತವಾಗಿದ್ದು, ಜನರಲ್ಲಿ ಸಾಮಾಜಿಕ ಅಸಮಾನತೆ ವಿರುದ್ಧ ಜಾಗೃತಿ ಮೂಡಿಸಲು ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತಿದೆ ಎಂದರು.

ನ್ಯಾಯಾಧೀಶೆ ಎಬ್.ಬಿ.ಶೇಖ್ ಮಾತನಾಡಿ, ಯುವ ಸಮೂಹ ಸಾಮಾಜಿಕ ಜಾಲತಾಣಗಳಿಂದ ಸಾಧ್ಯವಾದಷ್ಟು ದೂರವಿದ್ದು, ಉಜ್ವಲ ಭವಿಷ್ಯದ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

ವಕೀಲರಾದ ಮಹಾಲಿಂಗಪ್ಪ, ಕಾಂತರಾಜ್, ಪಾಂಡುರಂಗಪ್ಪ, ಗ್ರಾಮದ ಮುಖಂಡ ಮಸಿಯಪ್ಪ, ರಮೇಶ್, ಬಿ.ಇ.ಜಗನ್ನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net