ಕುಡಿವ ನೀರಿನ ಟ್ಯಾಂಕ್ ಸ್ವಚ್ಛತೆಗೆ ಆಗ್ರಹ

HYR GP 23
Published on

ಹಿರಿಯೂರು: ಕುಡಿವ ನೀರಿನ ಟ್ಯಾಂಕ್ ಸ್ವಚ್ಛತೆ ಹಾಗೂ ಗ್ರಾಮ ನೈರ್ಮಲ್ಯಕ್ಕೆ ಆಗ್ರಹಿಸಿ ಗುರವಾರ ತಾಲೂಕಿನ ಖಂಡೇನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕುಡಿವ ನೀರಿನ ಟ್ಯಾಂಕ್‌ಗಳಲ್ಲಿ ಹುಳು, ಕಸ-ಕಡ್ಡಿ ಸಂಗ್ರಹವಾಗಿ ನೀರು ಕಲುಷಿತವಾಗಿದೆ. ಇದನ್ನು ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಸುವಂತೆ ಗ್ರಾಪಂ ಪಿಡಿಒ ಗಮನಕ್ಕೆ ತರಲಾಗಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ದೂರಿದರು.

ಗ್ರಾಮದೆಲ್ಲೆಡೆ ಕಸದ ರಾಶಿ ಬಿದ್ದಿದ್ದು, ಸ್ವಚ್ಛತೆ ಮರೀಚೆಕೆಯಾಗಿದೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು-ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ಸಮಾಜ ಸೇವಕ ಕೆ.ಎಸ್.ರವಿಕುಮಾರ್ ಆರೋಪಿಸಿದರು.

ಗ್ರಾಮಸ್ಥರಾದ ಆರ್.ಟಿ.ತಿಪ್ಪೇಸ್ವಾಮಿ, ಪ್ರಕಾಶ್, ಲೋಕಮ್ಮ, ಮಮತಾ, ತಿಮ್ಮಕ್ಕ, ತಿಪ್ಪೇಸ್ವಾಮಿ, ರಂಗಪ್ಪ, ಸೈಯಿದಾ ಬಾನು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net