ವಕೀಲರಿಗೆ ಆರ್ಥಿಕ ನೆರವು ಘೋಷಿಸಿ

HYR MANAVI 22
Published on

ಹಿರಿಯೂರು: ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ತಾಲೂಕು ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿ ಗ್ರೇಡ್-2 ತಹಸೀಲ್ದಾರ್ ಚಂದ್ರಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ ಮಾತನಾಡಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ನಿಂದ ನ್ಯಾಯಾಲಯಗಳು ಕಾರ್ಯನಿರ್ವಹಿಸದೆ ವಕೀಲರ ಜೀವನ ಸಂಕಷ್ಟದಲ್ಲಿದೆ ಎಂದು ಅಳಲು ತೋಡಿಕೊಂಡರು.

ಈ ಬಗ್ಗೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಘೋಷಿಸಿಲ್ಲ. ಆದ್ದರಿಂದ ಇಂದು ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದೇವೆ. ಕೂಡಲೇ ಸರ್ಕಾರ ಆರ್ಥಿಕ ನೆರವು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ವಕೀಲರಾದ ತಿಪ್ಪೇಸ್ವಾಮಿ, ಮೋಹನ್ ಕುಮಾರ್, ರಮೇಶ್, ವಿಜಯಾನಂದ್, ಕಾಂತರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net