ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ

HYR MANAVI 09
Published on

ಹಿರಿಯೂರು: ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ಸದ್ಯರು ಶುಕ್ರವಾರ ತಹಸೀಲ್ದಾರ್ ಜಿ.ಎಚ್.ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿದರು.

ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆ. ಕುಡಿತದಿಂದ ಕುಟುಂಬಗಳಲ್ಲಿ ಮತ್ತಷ್ಟು ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಸರ್ಕಾರ ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ಮಹಾಸಭಾ ಮಹಿಳಾ ಘಟಕ ಅಧ್ಯಕ್ಷೆ ಶಶಿಕಲಾ ರವಿಶಂಕರ್, ಘಟಕದ ಸರ್ವಮಂಗಳಾ ರಮೇಶ, ಶಾಮಲಾ ಸತೀಶ್, ತ್ರಿವೇಣಿ ಸತೀಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net