ಹಿರಿಯೂರಲ್ಲಿ ಶೀಘ್ರ ಮಿನಿ ವಿಧಾನಸೌಧ

HYR poornima 10
Published on

ಹಿರಿಯೂರು: ತಾಲೂಕಿನ ಆದಿವಾಲ ಗ್ರಾಮದ ಬಳಿ 10 ಎಕರೆ ಜಾಗದಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಶಾಸಕಿ ಕೆ. ಪೂರ್ಣಿಮಾ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ 2 ಕೋಟಿ ರೂ. ವೆಚ್ಚದ 11 ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಆಡಳಿತ ವ್ಯವಸ್ಥೆ ಚುರುಕುಗೊಳಿಸಲು, ಜನರಿಗೆ ಒಂದೇ ಕಡೆ ಸರ್ಕಾರಿ ಸೇವೆ ಕಲ್ಪಿಸುವ ಉದ್ದೇಶದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಕುಡಿವ ನೀರು, ಶಿಕ್ಷಣ, ಆರೋಗ್ಯ ಇತರ ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗೆ ಪೂರಕವಾದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದರು.

ಪ್ರಾಚಾರ್ಯರಾದ ನಾಗರಾಜ್, ಚಂದ್ರಯ್ಯ, ಎಇಇ ಶ್ರೀರಂಗಪ್ಪ, ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್, ಸದಸ್ಯ ಮಹೇಶ್ ಪಲ್ಲವ, ದಾದಾಪೀರ್, ರಾಮಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net