ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಅನುದಾನ

HYR suresh kumar 06
Published on

ಹಿರಿಯೂರು: ತಾಲೂಕಿನ ಶೈಕ್ಷಣಿಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದರು.

ಬೆಂಗಳೂರು-ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ ಹಿರಿಯೂರು ಪ್ರವಾಸಿ ಮಂದಿರಕ್ಕೆ ಶನಿವಾರ ಸಂಜೆ ಭೇಟಿ ನೀಡಿದ್ದ ವೇಳೆ ಶಾಸಕಿ ಪೂರ್ಣಿಮಾ ಜತೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿದರು.

ಬಿಇಒ ಕಟ್ಟಡ ನಿರ್ಮಾಣ, ಗುರುಭವನದ ಮೂಲ ಸೌಕರ್ಯ ಅಭಿವೃದ್ಧಿ, ಶಾಲೆ ಕೊಠಡಿಗಳ ದುರಸ್ತಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಅಗತ್ಯ ಅನುದಾನ ನೀಡುವಂತೆ ಪೂರ್ಣಿಮಾ ಮನವಿ ಮಾಡಿದರು.

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್, ಬಿಇಒ ಪಿ.ರಾಮಯ್ಯ, ಪೌರಾಯುಕ್ತ ಶಿವಪ್ರಸಾದ್, ಶಶಿಧರ್, ಅಕ್ಷರ ದಾಸೋಹ ಅಧಿಕಾರಿ ಎಲ್.ನಾಗರಾಜಾಚಾರ್, ನಿರಂಜನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net