

ಹಿರಿಯೂರು: ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜಯಂತ್ಯುತ್ಸವವನ್ನು ಸರ್ವ ಸಮುದಾಯದವರು ಆಚರಿಸಬೇಕು ಎಂದು ಶಾಸಕಿ ಕೆ.ಪೂರ್ಣಿಮಾ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.
12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಮೀರಿ ಸಮ ಸಮಾಜ ನಿರ್ಮಾಣ, ಸಮಾನತೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಅಂಬಿಗರ ಚೌಡಯ್ಯ. ಅವರ ತತ್ವ, ಆದರ್ಶಗಳು ಇಂದಿನ ಯುವ ಸಮೂಹಕ್ಕೆ ದಾರಿ ದೀಪವಾಗಬೇಕು ಎಂದರು.
ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯ ಓಂಕಾರಪ್ಪ, ಜಿಪಂ ಸದಸ್ಯೆ ರಾಜೇಶ್ವರಿ, ಶಿವರಂಜನಿ, ಪ್ರಾಚಾರ್ಯ ಡಾ.ಡಿ.ಧರಣೀಂದ್ರಯ್ಯ, ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್.ತಿಮ್ಮಯ್ಯ, ಗಂಗಾಧರ್, ಗ್ರೇಡ್ 2 ತಹಸೀಲ್ದಾರ್ ಚಂದ್ರಕುಮಾರ್ ಇತರರಿದ್ದರು.