ಮಹಿಳಾ ಪ್ರಗತಿಗೆ ವಿಶೇಷ ಆದ್ಯತೆ

HYR poshan 15
Published on

ಹಿರಿಯೂರು: ತಾಲೂಕಿನ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಶಾಸಕಿ ಕೆ.ಪೂರ್ಣಿಮಾ ಹೇಳಿದರು.

ತಾಲೂಕು ಕಚೇರಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ವಿಶೇಷ ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಕಳೆದ ಎರಡು ವರ್ಷದಲ್ಲಿ ಆರೋಗ್ಯ, ಶಿಕ್ಷಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಹೆಣ್ಣು ಮಕ್ಕಳ ಸಮಗ್ರ ಪೋಷಣೆಗಾಗಿ ಕೇಂದ್ರ ಸರ್ಕಾರ ಪೋಷಣಾ ಅಭಿಯಾನ ಕಾರ್ಯಕ್ರಮ ಅನುಷ್ಠಾನಗೊಳಿಸಿದ್ದು, ಗ್ರಾಮೀಣ ಭಾಗದ ಜನರಲ್ಲಿ ಅಪೌಷ್ಟಿಕತೆ ನಿವಾರಣೆ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದರು.

ಜಿಪಂ ಸದಸ್ಯೆ ರಾಜೇಶ್ವರಿ, ಸಿಡಿಪಿಒ ವೀಣಾ, ಶಾಂತಕುಮಾರಿ, ಮಂಜುಳಾ, ಚೇತನಾ, ತಿಪ್ಪಮ್ಮ, ಅಮೃತವರ್ಷಿಣಿ, ಶಾಂತಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net