

ಹಿರಿಯೂರು: ತಾಲೂಕಿನಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕಿ ಕೆ.ಪೂರ್ಣಿಮಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನರೇಂದ್ರ ಮೋದಿ ಕರೊನಾ ವೈರಸ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದು, ಪ್ರಧಾನಿ ಅವರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಕರೊನಾ ಗೆಲ್ಲಲು ಪಣ ತೊಡಬೇಕು. ಏ.5ರಂದು ಪ್ರತಿಯೊಬ್ಬರು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮನೆ ಮುಂಭಾಗ ದೀಪ ಬೆಳೆಗುವ ಮೂಲಕ ಕರೊನಾ ವಿರುದ್ಧ ಹೋರಾಡುತ್ತಿರುವವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ತಾಲೂಕಿನಲ್ಲಿ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಜಿಲ್ಲೆ ಕೇಂದ್ರಕ್ಕೆ ಶಿಫ್ಟ್ ಮಾಡಬೇಕು. ತಾಲೂಕಿಗೆ ಹೊರಗಿನಿಂದ ಬಂದಿರುವ 15 ಸಾವಿರ ಜನರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಅವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಪಿಡಿಒ, ಗ್ರಾಮಲೆಕ್ಕಾಧಿಕಾರಿ, ಆಶಾಕಾರ್ಯಕರ್ತೆಯರ ಸಮಿತಿ ರಚಿಸಿ ಪ್ರತಿ ಮನೆ ಮನೆಗೂ ತೆರಳು ಸಮೀಕ್ಷೆ ನಡಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.