ಕರೊನಾ ವೈರಸ್ ಬಗ್ಗೆ ಇರಲಿ ಎಚ್ಚರ

HYR shashikala zp 13
Published on

ಹಿರಿಯೂರು: ಕರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮನೋಭಾವ ಬಿಟ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅನಿವಾರ್ಯತೆ ಇದೆ ಎಂದು ಜಿಪಂ ಸದಸ್ಯೆ ಶಶಿಕಲಾ ಸುರೇಶ್ ಬಾಬು ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ಸೋಮವಾರ ಮಸ್ಕಲ್ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಚ್ಛತೆ-ಕರೊನಾ ಜಾಗೃತಿ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರೊನಾ ಹರಡದಿರಲು ಸಾಮಾಜಿಕ ಅಂತರದ ಜತೆ ಮನೆಯಲ್ಲೇ ಇದ್ದು ಸರ್ಕಾರದ ಆದೇಶ ಪಾಲಿಸಬೇಕು. ಆರೋಗ್ಯವಂತ ಪ್ರಜೆಗಳಿದ್ದರೆ ದೇಶದ ಅಭಿವೃದ್ಧಿ ಸಾಧ್ಯ. ವೈರಸ್ ನಿಯಂತ್ರಣ ಬರಿ ವೈದ್ಯರಿಂದ ಸಾಧ್ಯವಿಲ್ಲ. ಎಲ್ಲರೂ ಇದರ ವಿರುದ್ಧ ಹೋರಾಟಬೇಕು ಎಂದರು.

ಟ್ರಾೃಕ್ಟರ್, ಕೃಷಿಯಂತ್ರಗಳಿಗೆ ಕ್ಯಾನ್ ಮೂಲಕ ಡಿಸೇಲ್ ತರಲು ರೈತರಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಜಿಪಂ ಸದಸ್ಯೆ ರಾಜೇಶ್ವರಿ, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾದ ಪುಷ್ಪಲತಾ ಅಪ್ಪಾಜಿ, ಶಂಕರಮೂರ್ತಿ, ಚಂದ್ರಪ್ಪ, ಇಒ ಹನುಮಂತಪ್ಪ, ಟಿಎಚ್‌ಒ ವೆಂಕಟೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net