

ಹಿರಿಯೂರು: ಜನರ ಸುರಕ್ಷತೆಗೆ ಹಗಲಿರುಳು ಶ್ರಮಿಸುತ್ತಿರುವ ಕರೊನಾ ವಾರಿಯರ್ಸ್ ಸೇವೆ ಶ್ಲಾಘನೀಯ ಎಂದು ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಎಚ್.ಎಸ್.ಸುಂದರ್‌ರಾಜ್ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಿಗೆ ಕೊಡೆ ವಿತರಿಸಿ ಮಾತನಾಡಿದರು.
ಕರೊನಾ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಆಶಾ ಕಾರ್ಯಕರ್ತೆಯರು ಪಾತ್ರ ಅನನ್ಯ. ಸಮಾಜದ ಒಳಿತಿಗಾಗಿ ಶ್ರಮಿಸುತ್ತಿರುವವರ ಸೇವೆಯನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು.
ಟಿಎಚ್‌ಒ ಡಾ.ವೆಂಕಟೇಶ್ ಮಾತನಾಡಿದರು. ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ಬಿ.ಕೆ.ನಾಗಣ್ಣ, ಶಶಿಕಲಾ ರವಿಶಂಕರ್, ಎ.ರಾಘವೇಂದ್ರ, ಕೇಶವಮೂರ್ತಿ, ಉಮಾಶಂಕರ್, ಸತೀಶ್ ಬಾಬು, ರವಿಕುಮಾರ್, ಮಧು, ಪರಮೇಶ್ವರ್ ಇತರರಿದ್ದರು.