

ಹಿರಿಯೂರು: ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ್ ಒಡೆಯರ್ ಜಾರಿಗೆ ತಂದ ಪ್ರಗತಿಪರ ಯೋಜನೆಗಳು ಅವಿಸ್ಮರಣೀಯ ಎಂದು ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ ಹೇಳಿದರು.
ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ್ ಒಡೆಯರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೈಸೂರು ರಾಜ್ಯದಲ್ಲಿ ಆಡಳಿತ, ಶಿಕ್ಷಣ, ನೀರಾವರಿ ಸೇರಿ ಅನೇಕ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರ. ಅಣೆಕಟ್ಟೆ ಕಟ್ಟುವುದು ಎಂದರೆ ಸುಲಭದ ಕೆಲಸವಲ್ಲ. ಅದರಲ್ಲಿಯೂ ನಮ್ಮ ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ನಿರ್ಮಾಣಕ್ಕೆ ಅವರ ಕೊಡುಗೆ ಮರೆಯಲಾಗದು ಎಂದರು.
ಉಪನ್ಯಾಸಕರಾದ ಕೆ.ರಂಗಪ್ಪ, ಈ.ನಾಗೇಂದ್ರಪ್ಪ, ಪ್ರೇಮಾನಂದ ಗೌತಮ್, ವೆಂಕಟೇಶ್, ಮುಖ್ಯಶಿಕ್ಷಕಿ ವೈಶಾಲಿ, ತ್ರಿವೇಣಿ, ಮೇಘನಾ ಇದ್ದರು.