ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ

HYR junior college 23
Published on

ಹಿರಿಯೂರು: ವಿದ್ಯಾರ್ಥಿಗಳು ಯೋಗ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧಿಸಬಹುದು ಎಂದು ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಎಚ್.ಎಸ್.ಸುಂದರ್‌ರಾಜ್ ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ-ಸಿದ್ಧಾರ್ಥ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಫಾಸ್ಟ್ ಫುಡ್ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಪೌಷ್ಟಿಕ ಆಹಾರ ಸೇವನೆಯಿಂದ ದೈಹಿಕ-ಮಾನಸಿಕ ಸದೃಢತೆ ಜತೆಗೆ ಉತ್ತಮ ಆರೋಗ್ಯ ಹೊಂದಬಹುದು ಎಂದರು.

ಪ್ರೌಢಶಾಲೆ-ಕಾಲೇಜು ವಿಭಾಗದ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ದಂತ, ಕಿವಿ, ಮೂಗು, ಹೃದಯ ತಪಾಸಣೆ ನಡೆಸಲಾಯಿತು.

ನಿವೃತ್ತ ಮುಖ್ಯಶಿಕ್ಷಕ ಜೋಗಪ್ಪ, ನಾಗಣ್ಣ, ಎಂ.ಎಸ್.ರಾಘವೇಂದ್ರ, ಮಹಾಬಲೇಶ್ವರ ಶ್ರೇಷ್ಠಿ, ಉಪನ್ಯಾಸಕ ವೆಂಕಟೇಶ್, ಡಾ.ಹರ್ಷ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net