ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ

hiriyur sadashiva ayoga Report Enforcement Protest
Published on

ಹಿರಿಯೂರು: ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.

ಸೇನೆಯ ತಾಲೂಕಾಧ್ಯಕ್ಷ ಶಿವಕುಮಾರ್ ಮಾತನಾಡಿ, ಸದಾಶಿವ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಸಿ 8 ವರ್ಷ ಕಳೆದರೂ ಜಾರಿಯಾಗಿಲ್ಲ. ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸರ್ಕಾರಗಳು ವರದಿ ಜಾರಿಗೊಳಿಸಲು ವಿಫಲವಾಗಿವೆ ಎಂದು ದೂರಿದರು. ಮುಖಂಡರಾದ ಸಿಕಂದರ್, ನರಸಿಂಹಸ್ವಾಮಿ, ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net