ನಗರ ಯೋಜನಾ ಕಾಯ್ದೆ ತಿದ್ದುಪಡಿ ಸಲ್ಲ

NARAYANACHAR L
Published on

ಹಿರಿಯೂರು: ರಾಜ್ಯ ಸರ್ಕಾರ ನಗರ ಯೋಜನಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಿಲ್ಡರ್‌ಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ನಿವೃತ್ತ ಪೌರ ನೌಕರ ಹಾಗೂ ಪೌರ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಎಲ್.ನಾರಾಯಣಾಚಾರ್ ತಿಳಿಸಿದ್ದಾರೆ.

ಬಡಾವಣೆಗಳಲ್ಲಿ ಮೂಲ ಸೌಕರ್ಯ ಭಾಗಶಃ ಪೂರ್ಣಗೊಳಿಸಿದ್ದರೂ ನಿವೇಶನ ಮಾರಾಟಕ್ಕೆ ಅವಕಾಶ ನೀಡಲು ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೂರ್ಣ ಪ್ರಮಾಣದಲ್ಲಿ ಮೂಲಸೌಕರ್ಯ ಕಲ್ಪಿಸಿದ ಬಳಿಕವೇ ನಿವೇಶನ ಮಾರಾಟಕ್ಕೆ ಇಲ್ಲಿಯವರೆಗೆ ಒಪ್ಪಿಗೆ ನೀಡಲಾಗುತ್ತಿತ್ತು. ಬಿಲ್ಡರ್‌ಗಳು ಮೂಲಸೌಕರ್ಯ ಒದಗಿಸದೆ ನಿವೇಶನದಾರರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದರು.

ಇದಕ್ಕೆ ಕಡಿವಾಣ ಹಾಕಲು ಕಠಿಣ ನಿಯಮವನ್ನು ಈ ಹಿಂದೆ ಜಾರಿಗೆ ತರಲಾಗಿತ್ತು. ಆದರೆ, ಪ್ರಸ್ತುತ ತಿದ್ದುಪಡಿ ಮೂಲಕ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಅನುಕೂಲ ಕಲ್ಪಿಸಿದ್ದು, ಜನತೆಗೆ ಸಮಸ್ಯೆ ಆಗಲಿದೆ.

ಆದ್ದರಿಂದ ಪೂರ್ಣ ಪ್ರಮಾಣದಲ್ಲಿ ಮೂಲಸೌಕರ್ಯ ಕಲ್ಪಿಸಿದ ನಂತರವೇ ನಿವೇಶನ ಮಾರಾಟಕ್ಕೆ ಒಪ್ಪಿಗೆ ಕೊಡುವುದು ಸೂಕ್ತ ಎಂದು ನಾರಾಯಣಾಚಾರ್ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net