ದಲಿತ ವಚನಕಾರರ ಜಯಂತಿ

HYR vachana 22
Published on

ಹಿರಿಯೂರು: ವಚನಕಾರರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದಲಿತ ವಚನಕಾರರ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಮಾದರ ಚನ್ನಯ್ಯ, ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗಪೆದ್ದಿ, ಅಭಿನವ ಮಲ್ಲಿಕಾರ್ಜುನ, ಸಂಕವ್ವ, ಲಕ್ಕಮ್ಮ ಅವರ ಹೆಸರಿನಲ್ಲಿ ದಲಿತ ವಚನಕಾರರ ಜಯಂತಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

ಸದಸ್ಯ ಓಂಕಾರಪ್ಪ ಮಾತನಾಡಿ, ಸಮಾಜದ ಪರಿವರ್ತನೆಗೆ ಶ್ರಮಿಸಿದ ದಲಿತ ವಚನಕಾರರನ್ನು ಸ್ಮರಿಸಲು ಈ ಜಯಂತಿ ಆಚರಣೆ ಔಚಿತ್ಯಪೂರ್ಣವಾಗಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಡಾ.ಸಿ.ಧರಣೀಂದ್ರಯ್ಯ ಉಪನ್ಯಾಸ ನೀಡಿದರು. ತಹಸೀಲ್ದಾರ್ ಸತ್ಯನಾರಾಯಣ, ಪರಮೇಶ್ವರಪ್ಪ, ಜೀವೇಶ್, ಘಾಟ್ ಶ್ರೀಧರ್, ದುರುಗೇಶ್, ಶಶಿಧರ್, ಶ್ರೀನಿವಾಸ್, ತಿಪ್ಪೇಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net