

ಹಿರಿಯೂರು: ತಾಲೂಕಿನ ವಿವಿಧೆಡೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.
ನಗರದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಲಾಯಿತು. ಮಂಡಲ ಅಧ್ಯಕ್ಷ ವಿಶ್ವನಾಥ್, ಮಾಜಿ ಶಾಸಕ ಮಸ್ಕಲ್ ರಾಮಯ್ಯ, ಮುಖಂಡರಾದ ಜಿ. ಪ್ರೇಮ್‌ಕುಮಾರ್, ಎಂ.ವಿ. ಹರ್ಷ, ಹಾಲಪ್ಪ, ಆರಾಧ್ಯ ಕೃಷ್ಣಮೂರ್ತಿ, ಶ್ರೀನಿವಾಸ್, ಕಾಂತರಾಜು ಇತರರಿದ್ದರು.
ತಾಲೂಕು ಕಚೇರಿ, ತಾಪಂ, ನಗರಸಭೆ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.