

ಹಿರಿಯೂರು: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕರೊನಾ ಭೀತಿ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನ ಮುಂದೂಡಬೇಕು ಎಂದು ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಈ.ದೊಡ್ಡನಾಗಯ್ಯ ಒತ್ತಾಯಿಸಿದ್ದಾರೆ.
ಈಗಾಗಲೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ, ಮದುವೆ ಮತ್ತಿತರ ಸಮಾರಂಭಗಳಿಗೆ ನಿರ್ಬಂಧ ವಿಧಿಸಿರುವುದು ಸರಿಯಿದೆ. ಜತೆಗೆ ಗುಂಪು ಸೇರದಂತೆ ಸೇರಿ ಅನೇಕ ಸೂಚನೆ ಆರೋಗ್ಯ ದೃಷ್ಟಿಯಿಂದ ರಾಜ್ಯ ಸರ್ಕಾರ ಕೈಗೊಂಡಿದೆ.
ಆದರೆ, ವಿಧಾನಸಭೆ ಅಧಿವೇಶನ ಜರುಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ವಿಧಾನಸೌಧ, ಶಾಸಕರ ಭವನ ಸೇರಿ ವಿವಿಧೆಡೆ ಜಮಾಯಿಸುತ್ತಾರೆ.
ಇದರಿಂದ ಸೋಂಕು ಹರಡುವ ಭೀತಿ ಇದ್ದು, ತಕ್ಷಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿಟ್ಟಿನಲ್ಲಿ ಅಧಿವೇಶನ ರದ್ದುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.