ವಿವಿ ಸಾಗರದಲ್ಲಿ ಕಾಟ್ಲ ಮೀನು ಮರಿ ಬಿತ್ತನೆ

Hiriyur, vv Sagar, Fish Pudding, Sowing,
Published on

ಹಿರಿಯೂರು: ಬಯಲುಸೀಮೆ ರೈತರು ಮೀನು ಕೃಷಿಯಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬಹುದು ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಹೇಳಿದರು.

ತಾಲೂಕಿನ ವಿವಿ ಪುರ ಮೀನುಗಾರಿಕೆ ಸಹಕಾರ ಸಂಘ-ಮೀನುಗಾರಿಕೆ ಇಲಾಖೆ ಸಹಯೋಗದಲ್ಲಿ ವಿವಿ ಸಾಗರ ಜಲಾಶಯದಲ್ಲಿ ಮೀನು ಬಿತ್ತನೆಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಮೀನಿಗೆ ಉತ್ತಮ ಬೇಡಿಕೆ ಇದ್ದು, ರೈತರು ಕೃಷಿ ಜತೆಗೆ ಜಮೀನಿನಲ್ಲಿ ಮೀನು ಕೃಷಿ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದರು.

ಜಿಪಂ ಸದಸ್ಯ ಆರ್.ನಾಗೇಂದ್ರನಾಯ್ಕ ಮಾತನಾಡಿ, ಮೀನುಗಾರಿಕೆ ಕೃಷಿ-ಸರ್ಕಾರದ ಸೌಲಭ್ಯಗಳ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಿದರೆ ಮೀನುಗಾರಿಕೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಗ್ರಾಪಂ ಸದಸ್ಯ ಎ.ಉಮೇಶ್, ಸಹಕಾರ ಸಂಘದ ಅಧ್ಯಕ್ಷ ಪ್ರಸಾದ್, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಉಮೇಶ್, ಸಹಾಯಕ ನಿರ್ದೇಶಕ ಶ್ರೀನಿವಾಸ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್‌ಬಾಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net