ಮಹಿಳಾ ಪ್ರಾತಿನಿಧ್ಯತೆ ಹೆಚ್ಚಾಗಬೇಕು

HYR dharmapura Gp 07
Published on

ಹಿರಿಯೂರು: ಮಹಿಳೆಯರು ಹೆಚ್ಚು ಸುಶಿಕ್ಷಿತರಾಗುವುದರ ಮೂಲಕ ಪ್ರತಿಯೊಂದು ಕ್ಷೇತ್ರದಲ್ಲೂ ಅವರ ಪ್ರಾತಿನಿಧ್ಯತೆ ಹೆಚ್ಚಾಗಬೇಕು ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಧಿಕಾರಿ ಇ.ತಿಪ್ಪೇರುದ್ರಪ್ಪ ಹೇಳಿದರು.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಪುರ ಪಂಚಲಿಂಗೇಶ್ವರ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಗ್ರಾಪಂ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಗ್ರಾಮಸಭೆಯಲ್ಲಿ ಮಾತನಾಡಿದರು.

ಪಿಡಿಒ ಚಿಕ್ಕಣ್ಣ ಮಾತನಾಡಿ, ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಕಾರ್ಯ ನಿರ್ವಹಿಸುತ್ತಿದ್ದು, ಸಾಮಾಜಿಕ ಕಟ್ಟುಪಾಡುಗಳಿಂದ ಹೊರಬಂದು ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಮಹಿಳೆಯರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷೆ ಇಂದ್ರಮ್ಮ, ಉಪಾಧ್ಯಕ್ಷ ಡಿ.ಚಂದ್ರಶೇಖರ್, ಡಾ.ವಿ.ವೀರಣ್ಣ, ಮಂಜುನಾಥ್, ಸುರೇಶ್, ನಿಂಗಮ್ಮ, ಪ್ರೊ.ಮಲ್ಲಯ್ಯ, ಇಸಿಒ, ಹರೀಶ್, ಲೋಹಿತ್, ನರಸಿಂಹಮೂರ್ತಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net