

ಹಿರಿಯೂರು: ನಗರದಲ್ಲಿ ಕರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಹಿರಿಯೂರು ವಿಕಾಸ ವೇದಿಕೆ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್ ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿದರು.
ದೇಶ-ರಾಜ್ಯದಲ್ಲಿ ಕರೊನಾ ವೈರಸ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವುದರ ಜತೆಗೆ ಸಾರ್ವಜನಿಕ ಸ್ಥಳದಲ್ಲಿ ನಿಗಾ ತಂಡ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನಗರದ ಕೆಲ ಔಷಧ ಇತರ ಅಂಗಡಿಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಜನರನ್ನು ವಂಚಿಸಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವೇದಿಕೆ ಅಧ್ಯಕ್ಷ ಪಿ.ಶಿವಶಂಕರ್, ಎಸ್.ವಿ. ಅನಿಲ್‌ಕುಮಾರ್, ಟಿ. ಸಂಜಯ್ ಇತರರಿದ್ದರು.