ಮನೆಯಲ್ಲಿದ್ದು ಕರೊನಾ ಓಡಿಸಿ

HYR MP 09
Published on

ಹಿರಿಯೂರು: ಕರೊನಾ ಸೋಂಕು ತಡೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಲಾಕ್‌ಡೌನ್ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಒಂದು ಸಾವಿರ ಮಾಸ್ಕ್, ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದಲ್ಲಿ ಕರೊನಾ ಮಹಾಮಾರಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್ ಮೂಲಕ ದಿಟ್ಟಹೆಜ್ಜೆ ಇಟ್ಟಿದ್ದು, ಜನ ಸಹಕರಿಸಿದರೆ ಮಾತ್ರ ವೈರಸ್ ನಿಯಂತ್ರಣ ಸಾಧ್ಯವಾಗುತ್ತದೆ ಎಂದರು.

ಕರೊನಾ ಸೋಂಕು ತಡೆಗೆ ತೆಗೆದುಕೊಂಡಿರುವ ಸಿದ್ಧತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳು, ಪಾಲಕರು ಹಾಗೂ ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಲಘು ಉಪಹಾರ ವಿತರಿಸಲಾಯಿತು.

ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಮುಖಂಡರಾದ ಜಿ.ಪ್ರೇಮ್‌ಕುಮಾರ್, ದ್ಯಾಮಣ್ಣ, ಆರಾಧ್ಯ, ಮಲ್ಲೇಶ್, ಅಸ್ಗರ್ ಅಹಮ್ಮದ್, ಮಂಜು, ವೆಂಕಟೇಶ್, ಶ್ರವಣಗೆರೆ ದಯಾನಂದ್, ಡಾ.ಮೋಹನ್, ಡಾ.ವೆಂಕಟೇಶ್, ಡಾ.ಬಸವರಾಜ್, ಸಿಪಿಐ ರಾಘವೇಂದ್ರ, ತಾಪಂ ಸದಸ್ಯ ಯಶವಂತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net