

ಹಿರಿಯೂರು: ನಗರದ ಹರಿಶ್ಚಂದ್ರಘಾಟ್ ರಸ್ತೆಯಲ್ಲಿ ಬುಧವಾರ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಉಪನ್ಯಾಸಕ ಶ್ರೀನಿವಾಸ್ (45) ಮೃತಪಟ್ಟಿದ್ದಾರೆ.
ಇಲ್ಲಿನ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಿತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯ ಮುಗಿಸಿ ಮನೆಗೆ ವಾಪಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.