ಕಷ್ಟ ಎದುರಿಸಿ ಮುನ್ನಡೆದಾಗ ಇತಿಹಾಸ ಸೃಷ್ಟಿಸಲು ಸಾಧ್ಯ

06 10 2025_BGR RURAL_PAGE_2
ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ವೀರಭದ್ರಶಿವಾಚಾರ್ಯ ಸ್ವಾಮೀಜಿ, ಶಾಸಕ ಧೀರಜ್​ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ನಟ ಚಿಕ್ಕಹೆಜ್ಜಾಜಿ ಮಹದೇವಪ್ಪ, ತಾಲೂಕು ವೀರ ಶೈವ ಸೇವಾ ಅಭಿವೃದ್ಧಿ ಟ್ರಸ್ಟ್​ ಗೌರವಾಧ್ಯಕ್ಷ ಎಚ್​.ಜೆ.ರಾಜೇಂದ್ರ, ನಿವೃತ್ತ ಶಿಕ್ಷಕ ಕೆ.ಮಹಾಲಿಂಗಯ್ಯ ಇದ್ದರು.
Published on

ದೊಡ್ಡಬಳ್ಳಾಪುರ : ಆರ್ಥಿಕ, ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸಲು ಶಿಕ್ಷಣದಿಂದ ಸಾಧ್ಯ. ಜೀವನದಲ್ಲಿ ಯಶಸ್ಸಿಗೆ ಶಿಕ್ಷಣವೇ ಶಕ್ತಿಯಾಗಿರುತ್ತದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಶಾಖಾ ಮಠದ ಶ್ರೀವಿರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಬಸವಭವನದಲ್ಲಿ ತಾಲೂಕು ವೀರಶೈವ ಸೇವಾ ಅಭಿವೃದ್ಧಿ ಟ್ರಸ್ಟ್​ನಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬರು ಜೀವನದಲ್ಲಿ ದೊಡ್ಡ ಕನಸು ಕಾಣಬೇಕು. ಅನೇಕ ವಿದ್ಯಾರ್ಥಿಗಳಿಗೆ ತಾವು ಮುಂದೇ ಎನಾಗಬೇಕೆಂಬ ಚಿಂತೆಯೇ ಇರುವುದಿಲ್ಲ. ತಮ್ಮ ಗುರಿ ಮುಟ್ಟುವವರೆಗೆ ಅಚಲ ವಿಶ್ವಾಸ ಹೊಂದಿ ಯಾವುದಕ್ಕೂ ಹೆದರದೆ ಸತತ ಪ್ರಯತ್ನ ಮಾಡಬೇಕು. ಕಷ್ಟ ಎದುರಿಸಿ ಮುನ್ನಡೆದಾಗ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪ್ರೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯ

ಜತೆಗೆ ವಿನಯ ಇರಬೇಕು ಎಂದರು.

ಶಾಸಕ ಧೀರಜ್​ ಮುನಿರಾಜು ಮಾತನಾಡಿ, ಬಸವಣ್ಣ ಅವರ ಕಾಯಕವೇ ಕೈಲಾಸ ಎಂಬ ತತ್ವದಂತೆ ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಭಕ್ತಿ ಇರಬೇಕು. ಯಾವುದೇ ಕೆಲಸ ಮಾಡಿದರು ಅದಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇದು ಪ್ರತಿಭಾವಂತರ ಯುಗ. ಆಧುನಿಕತೆ ಹೆಚ್ಚಾಗಿ ಕಾಣುತ್ತಿದ್ದೇವೆ. ಕೃತಕ ಬುದ್ದಿವಂತಿಕೆಗಿಂತ ನಮ್ಮ ಸ್ವಂತ ಪರಿಶ್ರಮ ಇರಬೇಕು. ನಿರಂತರ ಪ್ರಯತ್ನದಿಂದ ಜೀವನದಲ್ಲಿ ಗುರಿ ಮುಟ್ಟಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಸಿದ್ಧಗಂಗೆಯಲ್ಲಿ ಲಾಂತರ ವಿದ್ಯಾರ್ಥಿಗಳು ವಿದ್ಯಾಭ್ಯಾಸ, ಅನ್ನದಾಸೋಹ ಸ್ವೀಕರಿಸಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್​ ಬಿಟ್ಟು ಕಲಿಕೆಗೆ ಹೆಚ್ಚಿನ ಸಮಯ ನೀಡಬೇಕು. ನಮ್ಮ ತಂದೆ ಹೈನುಗಾರಿಕೆ ಮಾಡುತ್ತಿದ್ದರು. ಆದ್ದರಿಂದ ನಮಗೆ ಶಿಕ್ಷಣ ಬೆಲೆ ಗೊತ್ತಿದೆ. ಮಕ್ಕಳನ್ನು ಚಿಕ್ಕಂದಿನಲ್ಲೇ ಬಗ್ಗಿಸಬಹುದು, ಬೆಳೆದು ನಿಂತಾಗ ಬಗ್ಗಿಸಲು ಸಾಧ್ಯವಿಲ್ಲ. ಪ್ರಸ್ತುತ ದಿನಗಳಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅವಕಾಶಗಳಿವೆ. ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡುತ್ತಿವೆ. > ವೆಂಕಟರಮಣಯ್ಯ ಮಾಜಿ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net