

ಹುಬ್ಬಳ್ಳಿ: ಎಸ್.ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ನಗರದ ಬೈರಿದೇವರಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶನಿವಾರ ಉಚಿತವಾಗಿ ನೋಟ್‌ಬುಕ್ ವಿತರಿಸಲಾಯಿತು.
ಫೌಂಡೇಷನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ನೋಟ್ ಬುಕ್ ವಿತರಿಸಿ ಮಾತನಾಡಿ, ಯಾರು ಶ್ರದ್ಧೆಯಿಂದ ಸಾಧನೆ ಮಾಡುತ್ತಾರೋ ಅಂಥವರು ಇತಿಹಾಸ ನಿರ್ಮಿಸುತ್ತಾರೆ. ಆದ್ದರಿಂದ ನಮ್ಮ ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ, ದೇಶದ ಕೀರ್ತಿ ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕು ಎಂದರು.
ವಾಕರಸಾ ಸಂಸ್ಥೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ, ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಪ್ರಮುಖರಾದ ಶಿವು ಕೊಪ್ಪದ, ಭೀಮರಾಯ ರಾಯಪುರ, ಮಂಜು ದಲಬಂಜನ, ಪರಮ್ ಕಿತ್ಲಿ, ಶಿವರುದ್ರಪ್ಪ ಬಡಿಗೇರ, ವಿನಾಯಕ ಹುಲಿಹಳ್ಳಿ, ಸಿದ್ದು ಪರಣ್ಣವರ, ವಿನೋದ ಬಂಕಾಪುರ, ಶಾನು ಖಾನ್, ನರಸಿಂಹ ಅರೆಪಲ್ಲಿ ಇತರರು ಇದ್ದರು.