ಹಿಟ್ ಆ್ಯಂಡ್ ರನ್‌ಗೆ ಯುವಕ ಬಲಿ

Accident
Published on

ಉಳ್ಳಾಲ: ರಾ.ಹೆ. 66ರ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಬುಧವಾರ ತಡರಾತ್ರಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.

ಜಲ್ಲಿಗುಡ್ಡೆ ನಿವಾಸಿ ಪ್ರಶಾಂತ್(35) ಮೃತಪಟ್ಟ ಯುವಕ. ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಹೋಗಿದ್ದು, ಮನೆಗೆ ಹಿಂದಿರುಗುತ್ತಿದ್ದಾಗ ಕಲ್ಲಾಪುವಿನಲ್ಲಿ ವಾಹನ ಗುದ್ದಿ ಪರಾರಿಯಾಗಿದೆ. ಘಟನೆಯಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಯುವಕ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಳು ವರ್ಷದ ಮಗುವನ್ನು ಅಗಲಿದ್ದಾರೆ. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ವಾಹನ ಪತ್ತೆಗಾಗಿ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net