

ಚಿತ್ರದುರ್ಗ: ರಾಜ್ಯದ ಸ್ವಾಯತ್ತತೆಗೆ ಕೇಂದ್ರ ಸರ್ಕಾರ ಧಕ್ಕೆ ತರುವಂತಿಲ್ಲ. ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದು ಸರ್ವಾಧಿಕಾರಿ ಪ್ರವೃತ್ತಿ ಆಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್. ಸಿ.ಮಹಾದೇವಪ್ಪ ಆತಂಕ ವ್ಯಕ್ತಪಡಿಸಿದರು.
ನಗರದ ಕವಾಡಿಗರಹಟ್ಟಿಗೆ ಸೋಮವಾರ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ, ಹಿಟ್ಲರ್ ಸಂಸ್ಕೃತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಹೇಳಿದರು.