

ಕುಂದಾಪುರ: ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ, ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಎಚ್ಐವಿ ಜಾಗೃತಿ ಕಾರ್ಯಕ್ರಮ ಶನಿವಾರ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಕುಂದಾಪುರ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕಿ ನಳಿನಾಕ್ಷಿ, ಎಚ್ಐವಿ ಲಕ್ಷಣಗಳು, ಚಿಕಿತ್ಸೆ ಹಾಗೂ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣಿಮಾ ಜೈನ್ ಮಾತನಾಡಿದರು. ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ರೋಹಿಣಿ, ನಾಗರಾಜ ವೈದ್ಯ ಎಂ., ಸುರೇಖಾ ಮತ್ತು ಮಲ್ಲಿಕಾ ಉಪಸ್ಥಿತರಿದ್ದರು. ನಿರಂಜನ ಶರ್ಮ ಸ್ವಾಗತಿಸಿದರು. ಅಕ್ಷಯ ವಂದಿಸಿದರು. ದೀಪಶ್ರೀ ನಿರೂಪಿಸಿದರು.