ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣಗೈದ ಸಿಎಂ

IMG-20240917-WA0018
Published on

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಷ್ಟ್ರಧ್ವಜಾರೋಹಣ ಮಾಡಿದರು.

ವಿವಿಧ ಪೊಲೀಸ್ ಪಡೆಗಳಿಂದ ಗೌರವ ವಂಧನೆ ಸ್ವೀಕರಿಸಿದರು. ರಾಷ್ಟ್ರಧ್ವಜಾರೋಹಣ ನಂತರ ಆಕರ್ಷಕ ಪಥಸಂಚಲನ ನಡೆಯಿತು.

ಸಾಂಸ್ಕೃತಿಕ ವೈಭವದ ಪ್ರದರ್ಶನ: ಡೊಳ್ಳು, ಬಂಜಾರ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕರಡಿ ಮಜಲು, ಗೊಂಬೆ ಕುಣಿತ, ಅಕ್ಷರದ ತೇರು, ಅಕ್ಷರ ಆವಿಷ್ಕಾರ, ವೀರಗಾಸೆ, ಕಹಳೆ ತಂಡ, ಮಹಿಳಾ ಡೊಳ್ಳು ತಂಡಗಳು, ಜೆಸ್ಕಾಂ ಪ್ರದರ್ಶನ, ಸಂಚಾರಿ ಪೊಲೀಸ್ ತಂಡಗಳ ಪ್ರದರ್ಶನ ಗಮನ ಸೆಳೆಯಿತು.

ವೇದಿಕೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚವರಾದ ಎಚ್.ಸಿ.ಮಹಾದೇವಪ್ಪ, ಕೆ.ಜೆ.ಜಾರ್ಜ್, ಪರಮೇಶ್ವರ್, ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ಸಂಸಜ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net