

ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಗದಗನಲ್ಲಿ ವಾರ್ಡ ನಂ. 10ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿವೇಶನವಿರದ ಬಡ ಕುಟುಂಬಗಳಿಗೆ ಮಂಜೂರು ಮಾಡಲಾದ ಹಕ್ಕುಪತ್ರಗಳ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ, ಪ್ರಭು ಬುರಬುರೆ, ಇಪ್ತಿಯಾಜ ಶಿರಹಟ್ಟಿ ಸೇರಿದಂತೆ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು